Saturday, May 4, 2024
Homeಕರಾವಳಿಉಡುಪಿಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿಗೆ ಆಹ್ವಾನ

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿಗೆ ಆಹ್ವಾನ

spot_img
- Advertisement -
- Advertisement -

ಉಡುಪಿ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಜನವರಿ 18 ರಂದು ನಡೆಯಲಿರುವ ಶ್ರೀ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವ ಸಮಾರಂಭಕ್ಕೆ ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಧ್ಯಕ್ಷರು , ಶಾಸಕರಾದ ಕೆ . ರಘುಪತಿ ಭಟ್ ಅವರು ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು .

ಉಡುಪಿ ಪರ್ಯಾಯ ಸುಗಮವಾಗಿ ನಡೆಸಲು ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು .

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ . ಕಾರಜೋಳ , ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ , ಶಾಸಕರಾದ ವೇದವ್ಯಾಸ ಕಾಮತ್ , ವಿಧಾನ ಪರಿಷತ್ ಸದಸ್ಯರಾದ ರವಿ ಕುಮಾರ್ , ಭಾರತಿ ಶೆಟ್ಟಿ ಮತ್ತು ಪರ್ಯಾಯೋತ್ಸವ ಸಮಿತಿಯ ಉಪಾಧ್ಯಕ್ಷರಾದ ಶ್ರೀಪತಿ ಭಟ್ ಉಚ್ಚಿಲ , ಪ್ರಧಾನ ಕಾರ್ಯದರ್ಶಿ ಗಳಾದ ವಿಷ್ಣು ಪ್ರಸಾದ್ ಪಾಡಿಗಾರ್ , ಆರ್ಥಿಕ ಸಮಿತಿ ಸಂಚಾಲಕರಾದ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!