Wednesday, June 3, 2026
Homeತಾಜಾ ಸುದ್ದಿವರಿಷ್ಠರ ಕರೆ ಹಿನ್ನೆಲೆ: ನಾಳೆ ಸಿಎಂ ಬಸವರಾಜ್‌ ಬೊಮ್ಮಾಯಿ ದೆಹಲಿಗೆ ಭೇಟಿ

ವರಿಷ್ಠರ ಕರೆ ಹಿನ್ನೆಲೆ: ನಾಳೆ ಸಿಎಂ ಬಸವರಾಜ್‌ ಬೊಮ್ಮಾಯಿ ದೆಹಲಿಗೆ ಭೇಟಿ

- Advertisement -
- Advertisement -

ಬೆಂಗಳೂರು: ವರಿಷ್ಠರ ಕರೆಯ ಮೇರೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಗುರುವಾರ ದೆಹಲಿಗೆ ತುರ್ತು ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 1.30 ರ ಸುಮಾರಿಗೆ ಅವರು ದೆಹಲಿಗೆ ತೆರಳಲಿದ್ದು, ಶುಕ್ರವಾರ ಮಧ್ಯಾಹ್ನ ರಾಜ್ಯಕ್ಕೆ ವಾಪಾಸ್ ಆಗಲಿದ್ದಾರೆ. ತಮ್ಮ ಭೇಟಿ ಸಂದರ್ಭದಲ್ಲಿ ಅವರು ಇಬ್ಬರು ಕೇಂದ್ರ ಸಚಿವರನ್ನು ಭೇಟಿಯಾಗುವರು ಎಂದು ಪ್ರವಾಸ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅವರು ವರಿಷ್ಠರ ಜತೆ ಚರ್ಚೆ ನಡೆಸುವುದಕ್ಕಾಗಿಯೇ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಒಂದು ಮೂಲದ ಪ್ರಕಾರ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರ ಸಭೆಯನ್ನು ಕರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!