Friday, June 5, 2026
Homeತಾಜಾ ಸುದ್ದಿಅತಿವೃಷ್ಠಿ ಹಾನಿ: ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ

ಅತಿವೃಷ್ಠಿ ಹಾನಿ: ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ

- Advertisement -
- Advertisement -

ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅತಿವೃಷ್ಠಿಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಶುಕ್ರವಾರ ಮಧ್ಯಾಹ್ನ 1:30ಕ್ಕೆ ದೇವನಹಳ್ಳಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ, ಬಳ್ಳಾರಿ ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಜಿಲ್ಲಾಧಿಕಾರಿ, ಸಿಎಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಹಾನಿಯ ಬಗ್ಗೆ ಸಿಎಂ ಬೊಮ್ಮಾಯಿ ಅವರು ಮಾಹಿತಿ ಪಡೆಯಲಿದ್ದಾರೆ.
ಸಂಬಂಧಿಸಿದ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಕೂಡ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದಾಗಿ ರಸ್ತೆ, ಸೇತುವೆಗಳು ಹಾಗೂ ಮನೆಗಳಿಗೂ ಹಾನಿ ಉಂಟಾಗಿದೆ. ಈಗಾಗಲೇ ಎರಡು ದಿನಗಳ ಕಾಲ ಸಿಎಂ ಜಿಲ್ಲಾ ಪ್ರವಾಸ ಕೈಗೊಂಡು ಮಳೆ ಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ.

ಸದ್ಯ ಐದು ಸಾವಿರ ಕೋಟಿ ಪರಿಹಾರ ಧನವನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಹೆಚ್ಚುವರಿ ಪರಿಹಾರವನ್ನು ಆಗಸ್ಟ್ ತಿಂಗಳಲ್ಲಿ ಪರಿಶೀಲನೆ ನಡೆಸಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ತೀವ್ರಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಜಿಲ್ಲೆಯ ಪ್ರಮುಖ ಅಧಿಕಾರಿಗಳ ಜೊತೆ ಸಭೆ ನಡೆಸಿ ವಸ್ತುಸ್ಥಿತಿಯ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಬಳಿಕ ಪರಿಹಾರ ಕ್ರಮಗಳ ಬಗ್ಗೆಯೂ ಕೆಲವೊಂದು ಕ್ರಮಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

- Advertisement -

Latest News

error: Content is protected !!