Sunday, May 19, 2024
Homeತಾಜಾ ಸುದ್ದಿಪ್ರವೀಣ್ ಪ್ರಕರಣದಲ್ಲಿ ಮಾತು ಕೊಡಲ್ಲ.. ಮಾಡಿ ತೋರಿಸುತ್ತೇವೆ: ಸಿಎಂ

ಪ್ರವೀಣ್ ಪ್ರಕರಣದಲ್ಲಿ ಮಾತು ಕೊಡಲ್ಲ.. ಮಾಡಿ ತೋರಿಸುತ್ತೇವೆ: ಸಿಎಂ

spot_img
- Advertisement -
- Advertisement -

ಬೆಂಗಳೂರು: ಕೋಮುಸೌಹಾರ್ದ ಕದಡುವ ಶಕ್ತಿಗಳಿಗೆ ಕಡಿವಾಣ ಹಾಕುವುದರಲ್ಲಿ ಹಿಂದೇಟು ಹಾಕುವುದಿಲ್ಲ, ಪ್ರವೀಣ್​​ ಕೊಲೆ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದೇವೆ.ರಾಜ್ಯದ ಜನರು ಸಂಯಮದಿಂದ ವರ್ತಿಸಬೇಕು, ಹರ್ಷನ ಪ್ರಕರಣದಲ್ಲಿ 24 ಗಂಟೆಯಲ್ಲೇ ಹಂತಕರನ್ನು ಬಂಧಿಸಿದೆವು, ಪ್ರವೀಣ್ ಪ್ರಕರಣದಲ್ಲಿ ಮಾತು ಕೊಡಲ್ಲ  ಮಾಡಿ ತೋರಿಸುತ್ತೇವೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದು ಜುಲೈ 28ಕ್ಕೆ 3 ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಂಪುಟ ಸಹೋದ್ಯೋಗಿಗಳ ಜೊತೆಗೆ ಸುದ್ದಿಗೋಷ್ಠಿಯನ್ನು ನಡೆಸಿದ ಸಿಎಂ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಿನ್ನೆ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್​​​​ ಹತ್ಯೆ ಪ್ರಕರಣ ಕುರಿತು ವಿಶೇಷವಾಗಿ ಮಾತನಾಡಿದರು. 

ಅಗತ್ಯಬಿದ್ದರೆ ರಾಜ್ಯದಲ್ಲಿ  ಉತ್ತರ ಪ್ರದೇಶದ ಯೋಗಿ ಮಾದರಿ ನಿಯಮವನ್ನು ಜಾರಿಗೆ ತರುತ್ತೇವೆ. ಗಲಭೆ ಸೃಷ್ಟಿಸಲೆಂದೇ ಸಂಘಟನೆಗಳು ಹುಟ್ಟಿಕೊಂಡಿವೆ. ಪ್ರವೀಣ್ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹಂತಕರ ಪತ್ತೆಗೆ ಐದು ತಂಡ ರಚನೆ ಮಾಡಲಾಗಿದ್ದು, ಕೇರಳಕ್ಕೂ ಹೋಗಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜಿ ಇಲ್ಲ ಎಂದರು

- Advertisement -
spot_img

Latest News

error: Content is protected !!