Sunday, June 7, 2026
Homeಕರಾವಳಿಉಡುಪಿನಾಳೆ ಉಡುಪಿಗೆ ಆಗಮಿಸಲಿರುವ ಮುಖ್ಯಮಂತ್ರಿ ಬೊಮ್ಮಾಯಿ!

ನಾಳೆ ಉಡುಪಿಗೆ ಆಗಮಿಸಲಿರುವ ಮುಖ್ಯಮಂತ್ರಿ ಬೊಮ್ಮಾಯಿ!

- Advertisement -
- Advertisement -

ಮಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅ.13ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಅದಮಾರುನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಅಪರಾಹ್ನ 12:30ಕ್ಕೆ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು , 1 ಕ್ಕೆ ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನ್ಯೂ ಸೈನ್ಸ್ ಬ್ಲಾಕ್ ಕಟ್ಟಡದ ಶಂಕುಸ್ಥಾಪನೆ ಮತ್ತ ಕಂಪ್ಯೂಟರ್ ಸೈನ್ಸ್ ಲ್ಯಾಬೋರೇಟರಿ ಉದ್ಘಾಟನೆ ಮಾಡಲಿದ್ದಾರೆ.

2:30ಕ್ಕೆ ಕುಂತಲ ನಗರದಲ್ಲಿ ಸಮುದಾಯ ಭವನ ಮತ್ತು ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆ ಹಾಗೂ ಮೂಡುಬೆಳ್ಳೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುವ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸಂಜೆ 6:55ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

- Advertisement -

Latest News

error: Content is protected !!