Wednesday, June 24, 2026
Homeಕರಾವಳಿಉಡುಪಿನಾಳೆ ಸಿಎಂ ಬೊಮ್ಮಾಯಿ ಉಡುಪಿ‌ ಜಿಲ್ಲಾ ಪ್ರವಾಸ

ನಾಳೆ ಸಿಎಂ ಬೊಮ್ಮಾಯಿ ಉಡುಪಿ‌ ಜಿಲ್ಲಾ ಪ್ರವಾಸ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ ಹೆಲಿಕಾಫ್ಟರ್ ಮೂಲಕ‌ ಸಿಎಂ ಬೆಂಗಳೂರಿನಿಂದ ಉಡುಪಿಗೆ ಆಗಮಿಸಲಿದ್ದಾರೆ.

ಆದಿ ಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿರುವ ಸಿಎಂ ಮಧ್ಯಾಹ್ನ ಹನ್ನೆರಡು ಗಂಟೆಗೆ ಕಾಪು ತಾಲೂಕಿನ ಉಚ್ಚಿಲದಲ್ಲಿ ಮಹಾಲಕ್ಷ್ಮಿ ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಿಎಂ ಬನ್ನಂಜೆಯಲ್ಲಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ಮತ್ತು ಬನ್ನಂಜೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅನಂತರ ಸಂಜೆ 5.30ಕ್ಕೆ ಕುಂಜಿಬೆಟ್ಟಿನಲ್ಲಿ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭಾಗವಹಿಸಲಿದ್ದು, ನಾಳೆ ರಾತ್ರಿ ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

- Advertisement -

Latest News

error: Content is protected !!