Thursday, June 4, 2026
Homeತಾಜಾ ಸುದ್ದಿಇಂದು 'ಕಂದಾಯ ದಾಖಲೆ ಮನೆ ಬಾಗಿಲಿಗೆ' ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ಇಂದು ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

- Advertisement -
- Advertisement -

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾದ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಇಂದು (ಮಾ.೧೨) ರಂದು ರಾಜ್ಯಾದ್ಯಂತ ಅನುಷ್ಟಾನಗೊಳಿಸಲಾಗುತ್ತಿದ್ದು, ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರು ರಾಜ್ಯ ಮಟ್ಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅದರಂತೆ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಳಲೂರು ಹೋಬಳಿ ಹೊಳಲೂರು ಗ್ರಾಮದ ಶ್ರೀ ಮೈಲಾರೇಶ್ವರ ದತ್ತಾ ಶಿಬಿರ ಆಶ್ರಮದಲ್ಲಿ ಇಂದು (ಮಾ.12 ರಂದು) ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು, ಶಿವಮೊಗ್ಗ ಉಪವಿಭಾಗ ಇವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

- Advertisement -

Latest News

error: Content is protected !!