Friday, June 5, 2026
Homeತಾಜಾ ಸುದ್ದಿವಿಧ್ವಂಸಕ ಕೃತ್ಯಗಳಿಗೆ ದೇಶದಲ್ಲಿ ಅವಕಾಶವಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ವಿಧ್ವಂಸಕ ಕೃತ್ಯಗಳಿಗೆ ದೇಶದಲ್ಲಿ ಅವಕಾಶವಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ‌ಇಂದು ಮಾತನಾಡಿದ ಸಿಎಂ, ಪಿಎಫ್ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ, ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

Latest News

error: Content is protected !!