Thursday, June 4, 2026
Homeತಾಜಾ ಸುದ್ದಿರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಪರಿಶೀಲನೆ ಹಿನ್ನೆಲೆ : ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ಸಭೆ

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಪರಿಶೀಲನೆ ಹಿನ್ನೆಲೆ : ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ಸಭೆ

- Advertisement -
- Advertisement -

ಬೆಂಗಳೂರು: ದೇಶದಲ್ಲಿ ಕೋವಿಡ್ ನಾಲ್ಕನೇ ಅಲೆಯ ಆತಂಕ‌ ಎದುರಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಇತ್ತೀಚೆಗಿನ ಕೋವಿಡ್ ಪರಿಸ್ಥಿತಿಗಳ ಪರಿಶೀಲನೆ ಹಿನ್ನೆಲೆಗೆ‌ ರಾಜ್ಯ ಸರ್ಕಾರ ಮುಂದಾಗಿದೆ.

ಇಂದು ಬೆಂಗಳೂರಿನಲ್ಲಿ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ ನಿಗದಿಯಾಗಿದ್ದು, ಮಧ್ಯಾಹ್ನ 12.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ.

ಕಂದಾಯ ಸಚಿವ‌ ಆರ್. ಅಶೋಕ್, ಆರೋಗ್ಯ ಸಚಿವ‌ ಡಾ.‌ಕೆ.‌ ಸುಧಾಕರ್,ಐಟಿ-ಬಿಟಿ ಸಚಿವ ಡಾ. ಅಶ್ವಥ್ ನಾರಾಯಣ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರು, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಇಲಾಖೆ ಆಯುಕ್ತರು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸಭೆಗೆ ಆಹ್ವಾನ ನೀಡಲಾಗಿದೆ.

ಇದರ ಜೊತೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರಿಗೆ ಕೂಡಾ ಸಭೆಯಲ್ಲಿ ಪಾಲ್ಗೊಳ್ಳಲು ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!