Friday, June 5, 2026
Homeತಾಜಾ ಸುದ್ದಿಪಠ್ಯಪುಸ್ತಕ ಪರಿಷ್ಕರಣೆಗೆ ತೀವ್ರ ವಿರೋಧ ಹಿನ್ನೆಲೆ: ಇಂದು ಸಂಜೆ ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ

ಪಠ್ಯಪುಸ್ತಕ ಪರಿಷ್ಕರಣೆಗೆ ತೀವ್ರ ವಿರೋಧ ಹಿನ್ನೆಲೆ: ಇಂದು ಸಂಜೆ ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಹತ್ವದ ಸಭೆ ಕರೆದಿದ್ದಾರೆ.

ಇಂದು ಸಂಜೆ 5.30ಕ್ಕೆ ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಸಭೆ ನಡೆಯಲಿದೆ.

ಶಿಕ್ಷಣ ಸಚಿವ ಬಿ.ಸಿ.‌ ನಾಗೇಶ್ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ಸಿಎಂ ಚರ್ಚೆ ನಡೆಸಲಿದ್ದಾರೆ.

ಇತ್ತೀಚಿಗಷ್ಟೇ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಸಂಘಟನೆಗಳಿಂದ
ಬೃಹತ್ ರ್ಯಾಲಿ ನಡೆದಿತ್ತು.

ಇದರ ಬೆನ್ನಲ್ಲೇ ಪರಿಷ್ಕರಣೆ ಕೈಬಿಡುವಂತೆ ಆಗ್ರಹಿಸಿ‌ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂದು ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಸಭೆ ಕರೆದಿದ್ದಾರೆ.

- Advertisement -

Latest News

error: Content is protected !!