Thursday, June 4, 2026
Homeಕರಾವಳಿಉಡುಪಿಮಧ್ಯಾಹ್ನ 3 ಗಂಟೆಗೆ ಎಲ್ಲಾ‌ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

ಮಧ್ಯಾಹ್ನ 3 ಗಂಟೆಗೆ ಎಲ್ಲಾ‌ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಎಡಬಿಡದೆ ಕಳೆದೆರಡು ದಿನಗಳಿಂದ ಮಳೆ‌ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಡಿಸಿಗಳ ತುರ್ತು ಸಭೆ ಕರೆದಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಲ್ಲಿ ಸಿಎಂ ಗೃಹಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ.

ಮಳೆ ಪೀಡಿತ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಡಿಸಿಗಳಿಂದ ಸಿಎಂ ಮಾಹಿತಿ ಪಡೆಯಲಿದ್ದಾರೆ.‌

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳು ಕೂಡಾ ವೀಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಂದಾಯ ಸಚಿವ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್ ಕೂಡಾ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!