Friday, June 5, 2026
Homeಕರಾವಳಿಇಂದು ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ

ಇಂದು ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಂಗಳೂರು; ಇಂದು ಸಿಎಂ ಸಿದ್ದರಾಮಯ್ಯ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಳಗ್ಗೆ9.55ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಸಿಎಂ, 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.ಬಳಿಕ 11.10ಕ್ಕೆ ಉಡುಪಿಗೆ ರಸ್ತೆ ಮಾರ್ಗವಾಗಿ ತೆರಳಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ನಿರ್ಗಮಿಸಿ ಸಂಜೆ 4.15ಕ್ಕೆ ಮಂಗಳೂರು ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಬಳಿಕ ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 10.45ಕ್ಕೆ ಬೆಂಗಳೂರಿಗೆ ವಾಪಾಸ್ ತೆರಳಲಿದ್ದಾರೆ.

- Advertisement -

Latest News

error: Content is protected !!