Wednesday, June 24, 2026
Homeಕರಾವಳಿಉಡುಪಿಮೋಹನದಾಸ್ ಪೈ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಮೋಹನದಾಸ್ ಪೈ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

- Advertisement -
- Advertisement -

ಬೆಂಗಳೂರು: ಹಿರಿಯ ಉದ್ಯಮಿ ಆಗಿದ್ದ ಟಿ. ಮೋಹನದಾಸ್ ಪೈ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೋಹನದಾಸ ಪೈ ಅವರು ನಿಧನ ಹೊಂದಿದ್ದಾರೆ ಎನ್ನುವ ವಿಷಯ ನನಗೆ ಆಘಾತ ಉಂಟು ಮಾಡಿದೆ. ಹಿರಿಯ ಚೇತನರು, ಎಲ್ಲರ ಮಾರ್ಗದರ್ಶಕರಂತಿದ್ದ ಟಿ. ಮೋಹನ್ ದಾಸ್ ಪೈ ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ನೀಡಲಿ ಎಂದು ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದ್ದಾರೆ.

ಅವರ ಕುಟುಂಬದವರಿಗೆ ಪೈ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಸಿಎಂ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಮೋಹನ್ ದಾಸ್ ಪೈ ಅವರು ನಿನ್ನೆ ರಾತ್ರಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ನಲ್ಲಿ ನಿಧನ ಹೊಂದಿದ್ದರು. ಇಂದು ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

- Advertisement -

Latest News

error: Content is protected !!