Thursday, October 15, 2026
Homeಕರಾವಳಿಉಡುಪಿಅ.15ರಂದು ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್

ಅ.15ರಂದು ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ (ಅ.15) ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭ ಹಾಗೂ ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಬಳಿಕ ಸಂಜೆ 6.30ಕ್ಕೆ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

- Advertisement -

Latest News

error: Content is protected !!