Friday, May 3, 2024
Homeತಾಜಾ ಸುದ್ದಿರೈತರ ಖಾತೆಗೆ ರಾಜ್ಯ ಸರ್ಕಾರದಿಂದ ಕಿಸಾನ್ ಸಮ್ಮಾನ್ ಸಹಾಯಧನ ವರ್ಗಾವಣೆ

ರೈತರ ಖಾತೆಗೆ ರಾಜ್ಯ ಸರ್ಕಾರದಿಂದ ಕಿಸಾನ್ ಸಮ್ಮಾನ್ ಸಹಾಯಧನ ವರ್ಗಾವಣೆ

spot_img
- Advertisement -
- Advertisement -

ಬೆಂಗಳೂರು: ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಇಂದು ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬಸವರಾಜ‌ ಬೊಮ್ಮಾಯಿ ಇಂದು ರೈತರ ಖಾತೆಗಳಿಗೆ ಸಹಾಯಧನ ವರ್ಗಾಯಿಸಿದ್ದು, 2018-19 ರಿಂದ 2021-22 ರವರೆಗೆ ಭಾರತ ಸರ್ಕಾರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂಪಾಯಿ ರಾಜ್ಯದ ರೈತರಿಗೆ ಪಾವತಿಯಾದಂತಾಗಿರುತ್ತದೆ.

2021-22 ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975.12 ಕೋಟಿ ರೂಪಾಯಿಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ.

ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ. ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಅಂದರೆ 96% ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದ್ದು, ಕಳೆದ ಬಾರಿ 2020-21 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕೃಷಿಇಲಾಖೆಗೆ ಪ್ರಶಸ್ತಿಯು ಲಭಿಸಿದೆ.

2019 ರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂ.ಗಳ ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡುತ್ತಿದೆ.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಿಎಸ್ ವಂದನಾ ಶರ್ಮ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆ ಆಯುಕ್ತ ಶರತ್, ನಿರ್ದೇಶಕಿ ನಂದಿನಿಕುಮಾರಿ , ಜಲಾನಯನ ಇಲಾಖೆ ಆಯುಕ್ತ ಡಾ. ವೆಂಕಟೇಶ್, ನಿರ್ದೇಶಕ ಶ್ರೀನಿವಾಸ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!