Sunday, June 7, 2026
Homeತಾಜಾ ಸುದ್ದಿದುಷ್ಕರ್ಮಿಗಳಿಗೆ ಬಲಿಯಾದ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಕ್ಕೆ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ದುಷ್ಕರ್ಮಿಗಳಿಗೆ ಬಲಿಯಾದ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಕ್ಕೆ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು : ದುಷ್ಕರ್ಮಿಗಳಿಗ ಬಲಿಯಾದ ಕರಾವಳಿಯ ನಾಲ್ವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚೆಕ್ ವಿತರಿಸಿದ್ರು. ಒಟ್ಟು ಆರು ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸದರು.

ಈ ವೇಳೆ ಮಾತನಾಡಿದ ಅವರು ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.

ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.ಈ ಸಂದರ್ಭದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್‌ಉದರ್ಶಿಗಳಾದ ನಾಸಿರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

- Advertisement -

Latest News

error: Content is protected !!