Thursday, June 11, 2026
Homeತಾಜಾ ಸುದ್ದಿಪ್ರಧಾನಿ ಮೋದಿ ನೇತೃತ್ವದ ನೀತಿ ಆಯೋಗದ ಸಭೆಯಲ್ಲಿ ಭಾಗಿಯಾದ ಸಿಎಂ ಡಿ.ಕೆ. ಶಿವಕುಮಾರ್

ಪ್ರಧಾನಿ ಮೋದಿ ನೇತೃತ್ವದ ನೀತಿ ಆಯೋಗದ ಸಭೆಯಲ್ಲಿ ಭಾಗಿಯಾದ ಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದಾರೆ.

ರಾಷ್ಟ್ರಪತಿ ಭವನದ ಆರ್ ಬಿಸಿಸಿ ಬಿಲ್ಡಿಂಗ್ ನಲ್ಲಿ ನೀತಿ ಆಯೋಗದ ಸಭೆ ನಡೆದಿದ್ದು, ಎಲ್ಲಾ ರಾಜ್ಯಗ‌‌ಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಗಳು ಭಾಗಿಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರದಲ್ಲಿದ್ದ ವೇಳೆ ನೀತಿ ಆಯೋಗದ ಸಭೆಗಳಲ್ಲಿ ಭಾಗವಹಿಸದೇ ದೂರ ಉಳಿದಿದ್ದರು.

ನಿನ್ನೆಯಿಂದ ನವದಹೆಲಿ ಪ್ರವಾಸದಲ್ಲಿರುವ ಡಿ.ಕೆ. ಶಿವಕುಮಾರ್ ನಿನ್ನೆ ಕೇಂದ್ರ ನಗರಾಭಿವೃದ್ಧಿ ಮತ್ತು ನಗರ ವ್ಯವಹಾರಗಳ ಇಲಾಖೆ ಸಚಿವ ಮನೋಹರ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿದ್ದರು.

- Advertisement -

Latest News

error: Content is protected !!