- Advertisement -


- Advertisement -
ಮಡಿಕೇರಿ: ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನಕ್ಕೆ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಹೆಲಿಕಾಫ್ಟರ್ ಮೂಲಕ ಪತ್ನಿ ಉಷಾ ಜೊತೆ ಭಾಗಮಂಡಲಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಸಂಗಮದಲ್ಲಿ ಕಾವೇರಿ ನದಿಗೂ ಪೂಜೆ ಸಲ್ಲಿಸಿದರು. ಇದೇ ವೇಳೆ ಕೊಡಗು ಜಿಲ್ಲಾಡಳಿತದ ವತಿಯಿಂದ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಈ ವೇಳೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ಮತ್ತು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಉಪಸ್ಥಿತರಿದ್ದರು.
ಬಳಿಕ ಮಡಿಕೇರಿ ಸಮೀಪದ ಮೇಕೇರಿಯಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ನಡೆದ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹ್ಯಾರೀಸ್ ನಲಪಾಡ್ ವಿವಾಹ ಕಾರ್ಯಕ್ರಮದಲ್ಲಿ ಕೂಡಾ ಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದರು
- Advertisement -


