Thursday, June 4, 2026
Homeಕರಾವಳಿರಾಜ್ಯಸಭೆಗೆ ನಾಮನಿರ್ದೇಶನಗೊಂಡ ಡಾ‌. ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಅಭಿನಂದಿಸಿದ ಸಿಎಂ

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಡಾ‌. ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಅಭಿನಂದಿಸಿದ ಸಿಎಂ

- Advertisement -
- Advertisement -

ಬೆಂಗಳೂರು: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿದರು.

ಬೆಂಗಳೂರಿನ ಯು.ಬಿ. ಸಿಟಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಸಿಎಂ ವೀರೇಂದ್ರ ಹೆಗ್ಗಡೆಯವರಿಗೆ ಹಾರ ಹಾಕಿ ಶಾಲು ಹೊದಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಚಿವ ಶಿವರಾಮ್ ಹೆಬ್ಬಾರ್, ಶಾಸಕರಾದ ಎಸ್. ಆರ್. ವಿಶ್ವನಾಥ್ , ಡಾ. ಶಿವರಾಜ್ ಪಾಟೀಲ್ ಮತ್ತು ಇತರರು ಉಪಸ್ಥಿತರಿದ್ದರು.

ನಿನ್ನೆಯಷ್ಟೇ ಕೇಂದ್ರ ಸರ್ಕಾರ ಡಾ. ವೀರೇಂದ್ರ ಹೆಗ್ಗಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು.

- Advertisement -

Latest News

error: Content is protected !!