Saturday, May 4, 2024
Homeತಾಜಾ ಸುದ್ದಿಆಸಿಡ್ ದಾಳಿಗೆ ಒಳಗಾದ ಯುವತಿಗೆ ಸ್ಥಳದಲ್ಲೇ ಉದ್ಯೋಗ ನೀಡಿದ ಸಿಎಂ ಸಿದ್ದರಾಮಯ್ಯ

ಆಸಿಡ್ ದಾಳಿಗೆ ಒಳಗಾದ ಯುವತಿಗೆ ಸ್ಥಳದಲ್ಲೇ ಉದ್ಯೋಗ ನೀಡಿದ ಸಿಎಂ ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು: ಕಳೆದ ವರ್ಷ ಏಪ್ರಿಲ್ ನಲ್ಲಿ ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಯೋಗದ ಭರವಸೆ ನೀಡಿದ್ದಾರೆ. ನಿನ್ನೆ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದ್ದಾರೆ.

2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದರು. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು.ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ವರ್ಷ ಏಪ್ರಿಲ್ ನಲ್ಲಿ  ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ಯುವತಿಯ ಮೇಲೆ ಪಾಗಲ್ ಪ್ರೇಮಿ ನಾಗೇಶ್ ಎಂಬಾತ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಆಸಿಡ್ ದಾಳಿ ಮಾಡಿದ್ದ. ಬೆಳಗ್ಗೆ ಎಂಟೂವರೆಯ ಸುಮಾರಿಗೆ ಯುವತಿ ತನ್ನ ತಂದೆಯ ಬೈಕ್‌ನಲ್ಲಿ ಕೆಲಸ ಮಾಡುವ ಕಚೇರಿಗೆ ಬಂದಿದ್ದಳು. ಮಗಳನ್ನು ಕಚೇರಿಗೆ ಡ್ರಾಪ್ ಮಾಡಿ ತಂದೆ ಅಲ್ಲಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಯುವತಿ ಇದ್ದ ಜಾಗಕ್ಕೆ ಬಂದ ಕಿರಾತಕ ನಾಗೇಶ್ ಆಕೆಯ ಮೇಲೆ ಆಸಿಡ್ ದಾಳಿ ಮಾಡಿದ್ದ. ಬಳಿಕ ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪೊಲೀಸರು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ.

- Advertisement -
spot_img

Latest News

error: Content is protected !!