Sunday, June 7, 2026
Homeಕರಾವಳಿಬೆಳ್ತಂಗಡಿ ಗೃಹರಕ್ಷಕ ದಳ ಘಟಕಾಧಿಕಾರಿ ಜಯಾನಂದರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಬೆಳ್ತಂಗಡಿ ಗೃಹರಕ್ಷಕ ದಳ ಘಟಕಾಧಿಕಾರಿ ಜಯಾನಂದರಿಗೆ ಮುಖ್ಯಮಂತ್ರಿ ಚಿನ್ನದ ಪದಕ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಜಯಾನಂದ ಲಾಲ ಇವರು 2021, 2022, 2023ನೇ ಸಾಲಿನ ‘ಮುಖ್ಯಮಂತ್ರಿ ಚಿನ್ನದ ಪದಕ’ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. 

 ಬೆಳ್ತಂಗಡಿ ತಾಲೂಕಿನ ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಕಳೆದ ೩೩ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಯಾನಂದ ಅವರ ಸೇವೆಯನ್ನು ಪರಿಗಣಿಸಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ. ಸೆ.೨೨ರಂದು ಬೆಂಗಳೂರಿನ ಆರ್.ಎ ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಬನ್ನೇರುಘಟ್ಟದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಜಯಾನಂದ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

- Advertisement -

Latest News

error: Content is protected !!