ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಭೆ ನಡೆಸಿದರು.
ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಮಳೆ, ಸಿಎಸ್ ಆರ್ ಶಾಲೆಗಳು, ಕಾನೂನು ಮತ್ತು ಸುವ್ಯವಸ್ಥೆ, ಎಸ್ ಐ ಆರ್ ಪ್ರಕ್ರಿಯೆ ಮತ್ತಿತರ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಭ್ರಷ್ಟಾಚಾರದ ಬಗ್ಗೆ ದೂರು ನೀಡಲು ಸರ್ಕಾರಿ ಕಚೇರಿಗಳಲ್ಲಿ ಫೋನ್ ನಂಬರ್ ಗಳನ್ನು ಪ್ರದರ್ಶಿಸಬೇಕು ಎಂದು ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಯು.ಟಿ. ಖಾದರ್, ಶರಣ್ ಪ್ರಕಾಶ್ ಪಾಟೀಲ್, ಬೈರತಿ ಸುರೇಶ್, ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭಾಗವಹಿಸಿದ್ದರು.


