Sunday, August 30, 2026
Homeಕರಾವಳಿಮಂಗಳೂರುಕೋಟೆಕಾರ್ ಬ್ಯಾಂಕ್ ದರೋಡೆ; ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ, ಎಲ್ಲಾ...

ಕೋಟೆಕಾರ್ ಬ್ಯಾಂಕ್ ದರೋಡೆ; ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ, ಎಲ್ಲಾ ಟೋಲ್ ಗಳಲ್ಲಿ ತಪಾಸಣೆಗೆ ಸೂಚನೆ

- Advertisement -
- Advertisement -

ಮಂಗಳೂರು:ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ. ಶೀಘ್ರ ಆರೋಪಿಗಳ ಪತ್ತೆಗೆ ಸಭೆಯಲ್ಲಿ ಸಿಎಂ ಖಡಕ್ ಸೂಚನೆ ನೀಡಿದ್ದಾರೆ‌.

ಪ್ರಕರಣದ ಹಿನ್ನೆಲೆಯಲ್ಲಿ
ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಪಶ್ಚಿಮ ವಲಯ ಐಜಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ದಕ್ಷಿಣ ಕನ್ನಡ ಎಸ್ಪಿ ಯತೀಶ್ ಮತ್ತು ಡಿವೈಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ? ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು.

ಇದೇ ವೇಳೆ, ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

- Advertisement -

Latest News

error: Content is protected !!