Thursday, June 25, 2026
Homeತಾಜಾ ಸುದ್ದಿನಾಳೆ ಎಲ್ಲಾ ಜಿಲ್ಲಾಡಳಿತಗಳಿಂದ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನ: ವೀಡಿಯೋ ಕಾನ್ಫರೆನ್ಸ್ ಮೂಲಕ ಸಿದ್ಧತಾ...

ನಾಳೆ ಎಲ್ಲಾ ಜಿಲ್ಲಾಡಳಿತಗಳಿಂದ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನ: ವೀಡಿಯೋ ಕಾನ್ಫರೆನ್ಸ್ ಮೂಲಕ ಸಿದ್ಧತಾ ಮಾಹಿತಿ ಪಡೆದ ಸಿಎಂ

- Advertisement -
- Advertisement -

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಇಂದು ವೀಡಿಯೋ ಕಾನ್ಫರೆನ್ಸ್ ನಡೆಸಿದರು.ಬೆಂಗಳೂರಿನ ಆರ್.ಟಿ. ನಗರದ ಖಾಸಗಿ ನಿವಾಸದಿಂದ ವೀಡಿಯೋ ಸಂವಾದದ ಮೂಲಕ ಸಿಎಂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಮತ್ತು ಕ್ವಿಟ್ ಇಂಡಿಯಾ ಕಾರ್ಯಕ್ರಮಗಳ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದರು.ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೂಡಾ ಭಾಗವಹಿಸಿದ್ದರು.

ನಾಳೆ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಜಿಲ್ಲಾಡಳಿತಗಳಿಂದ ಸನ್ಮಾನ ಕಾರ್ಯಕ್ರಮಗಳ ಸಿದ್ಧತೆ ಬಗ್ಗೆಯೂ ಸಿಎಂ ಮಾಹಿತಿ ಪಡೆದಿದ್ದಾರೆ.

- Advertisement -

Latest News

error: Content is protected !!