Thursday, June 4, 2026
Homeಕರಾವಳಿಉಡುಪಿಮಳೆ ಹಾನಿ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ಸಿಎಂ ವೀಡಿಯೋ ‌ಕಾನ್ಫರೆನ್ಸ್

ಮಳೆ ಹಾನಿ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ಸಿಎಂ ವೀಡಿಯೋ ‌ಕಾನ್ಫರೆನ್ಸ್

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಇತ್ತೀಚೆಗೆ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿರು.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಳೆಯಿಂದಾದ ಹಾನಿಯ ವಿವರ ಪಡೆದರು. ಮಳೆಯಿಂದ ಜಿಲ್ಲೆಗಳಲ್ಲಿ ಸಂಭವಿಸಿರುವ ಮನೆ ಹಾನಿಗೆ ತಕ್ಷಣ ಪರಿಹಾರ ಒದಗಿಸಬೇಕು. ಬೆಳೆಹಾನಿಯ ನಿಖರ ಮಾಹಿತಿ ಪಡೆಯಬೇಕು ಹಾಗೂ ರಸ್ತೆ ಹಾನಿಯಿಂದ ವಾಹನ ಸಂಚಾರ ಸುಗಮವಾಗದಿದ್ದಲ್ಲಿ ವಾಹನ ಸಂಚಾರ ಮಾರ್ಗ ಬದಲಾಯಿಸಬೇಕು ಎಂದು ಸಿಎಂ ಸೂಚನೆಗಳನ್ನು ನೀಡಿದರು.

ವಿಡಿಯೋ ಸಂವಾದದಲ್ಲಿ ಸಚಿವ ಎಸ್.ಟಿ. ಸೋಮಶೇಖರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!