Saturday, June 6, 2026
Homeತಾಜಾ ಸುದ್ದಿಕಾಂಗ್ರೆಸ್ ಗೆ “ಕೈ” ಕೊಟ್ಟ ಸಿಎಂ ಇಬ್ರಾಹಿಂ: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

ಕಾಂಗ್ರೆಸ್ ಗೆ “ಕೈ” ಕೊಟ್ಟ ಸಿಎಂ ಇಬ್ರಾಹಿಂ: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಎಂಎಲ್ಸಿ ಸಿಎಂ ಇಬ್ರಾಹಿಂ ಅವರು, ಕಾಂಗ್ರೆಸ್ ಪಕ್ಷದ ಸದಸ್ಯ ಸ್ಥಾನ ಹಾಗೂ ಎಂಎಲ್ಸಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನಗೊಂಡಂತೆ ಆಗಿದೆ.ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. , ಕಳೆದ 12 ವರ್ಷಗಳಿಂದ ಪಕ್ಷದಲ್ಲಿ ಇದ್ದೇನೆ. ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಚುನಾವಣೆ ನಡೆಸಿದ್ದರೆ 13 ಸದಸ್ಯರ ಬೆಂಬಲದೊಂದಿಗೆ ತಾನೇ ಗೆಲ್ಲುತ್ತಿದ್ದೆ. ಆದ್ರೇ ಹಾಗೆ ಮಾಡದೆ ಬಿ.ಕೆ ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿದ್ದು ಬೇಸರ ತಂದಿದೆ ಎಂದು ತಿಳಿಸಿದ್ದಾರೆ.

ನನಗಿಂತಲೂ ಕಿರಿಯವರಾದ ಅವರನ್ನು ಪರಿಷತ್ ವಿಪಕ್ಷ ನಾಯಕರನ್ನಾಗಿ ಮಾಡಿದ್ದು ಬೇಸರ ತರಿಸಿದೆ. ಈ ಬಗ್ಗೆ ನಾನು ಕೇಳಿದ ಪ್ರಶ್ನೆಗೂ ಸರಿಯಾದ ಉತ್ತರ ಸಿಕ್ಕಿಲ್ಲ. ಈ ಎಲ್ಲಾ ಕಾರಣದಿಂದಾಗಿ ನಾನು ಕಾಂಗ್ರೆಸ್ ಪಕ್ಷದ ಸದಸ್ಯ ಸ್ಥಾನಕ್ಕೆ, ಎಂ.ಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!