Saturday, June 6, 2026
Homeಕರಾವಳಿಮಂಗಳೂರುಮಂಗಳೂರಿನಲ್ಲಿ ಕರ್ನಾಟಕ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮಂಗಳೂರಿನಲ್ಲಿ ಕರ್ನಾಟಕ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

- Advertisement -
- Advertisement -

ಮಂಗಳೂರು: ಕರ್ನಾಟಕ ಕ್ರೀಡಾಕೂಟ-2025ಕ್ಕೆ ಮಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ‌ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತದ  ಸಂಯುಕ್ತಾಶ್ರಯದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.ಕ್ರೀಡಾಕೂಟ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ ಇನ್ನಿತರೆ ರಿಯಾಯ್ತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ಬಜೆಟ್ ನಲ್ಲಿ ಮಂಗಳೂರು ಮತ್ತು ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ತಲಾ 3 ಕೋಟಿ ರೂಪಾಯಿ ನಿಗದಿ ಮಾಡುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು. ಅಲ್ಲದೇ, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇ. 2 ರಷ್ಟು ಉದ್ಯೋಗಗಳು ಕ್ರೀಡಾಟುಗಳಿಗೆ ಮೀಸಲು ಇಡಲಾಗುವುದು. ಜೊತೆಗೆ ಪೊಲೀಸ್, ಅರಣ್ಯ ಇಲಾಖೆ ಸೇರಿ ಸಮವಸ್ತ್ರ ಧರಿಸುವ ಹುದ್ದೆಗಳಿಗೆ ಶೇ3 ರಷ್ಟು ಉದ್ಯೋಗ ಕ್ರೀಡಾಪಟುಗಳಿಗೆ ಉದ್ಯೋಗ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದರು.

ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

- Advertisement -

Latest News

error: Content is protected !!