Saturday, April 27, 2024
Homeಕರಾವಳಿಉಡುಪಿದ.ಕ., ಕೊಡಗು, ಉ.ಕ. ಜಿಲ್ಲೆಗಳಲ್ಲಿ ಭೂ ಕುಸಿತದ ಸೂಕ್ಷ್ಮ ಪ್ರದೇಶ ಗುರುತಿಸಿ ಜನರನ್ನು ಕಡ್ಡಾಯ ಸ್ಥಳಾಂತರಿಸಿ:...

ದ.ಕ., ಕೊಡಗು, ಉ.ಕ. ಜಿಲ್ಲೆಗಳಲ್ಲಿ ಭೂ ಕುಸಿತದ ಸೂಕ್ಷ್ಮ ಪ್ರದೇಶ ಗುರುತಿಸಿ ಜನರನ್ನು ಕಡ್ಡಾಯ ಸ್ಥಳಾಂತರಿಸಿ: ಜಿಲ್ಲಾಡಳಿತಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಣ್ಣಿನ ಕುಸಿತ, ಭೂಕುಸಿತದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಜನರನ್ನು ಕಡ್ಡಾಯವಾಗಿ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ವೇಳೆ ಸಿಎಂ ದಕ್ಷಿಣ ಕನ್ನಡ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲಾಡಳಿತಗಳಿಗೆ ಈ ಸೂಚನೆ ನೀಡಿದ್ದಾರೆ.

ಇದೇ ವೇಳೆ ರಸ್ತೆಗಳ ಮೇಲೆ ಭೂಕುಸಿತ ಉಂಟಾದಲ್ಲಿ ತೆರವುಗೊಳಿಸಲು ತಂಡಗಳನ್ನು ದಿನದ 24 ಗಂಟೆಯೂ ಸನ್ನದ್ಧವಾಗಿರಿಸುವಂತೆ ಸಿಎಂ ಸೂಚಿಸಿದ್ದಾರೆ.

ಅಲ್ಲದೇ, ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಉತ್ತಮ ಆಹಾರ ಒದಗಿಸಬೇಕು ಎಂದು ಹೇಳಿರುವ ಬಸವರಾಜ ಬೊಮ್ಮಾಯಿ‌, ಕಾಳಜಿ ಕೇಂದ್ರಕ್ಕೆ ಬರದ ನಿರಾಶ್ರಿತರಿಗೆ ಡ್ರೈ ರೇಷನ್ ಕಿಟ್ ಒದಗಿಸುವಂತೆ ಆದೇಶಿಸಿದ್ದಾರೆ.

ವೀಡಿಯೋ ಕಾನ್ಪರೆನ್ಸ್ ಮೂಲಕ ನಡೆದ ಸಭೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಡಾ. ಸಿ.ಎನ್. ಅಶ್ವತ್ಥನಾರಾಯಣ, ನಾರಾಯಣ ಗೌಡ, ಗೋಪಾಲಯ್ಯ, ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!