Thursday, June 4, 2026
Homeಕರಾವಳಿಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ; ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು...

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ; ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಜಿಲ್ಲಾ ಸಚಿವರಿಗೆ ಸೂಚನೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.

ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

- Advertisement -

Latest News

error: Content is protected !!