Tuesday, May 14, 2024
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಅನುಷ್ಠಾನ ಚುರುಕುಗೊಳಿಸಿ: ಜಿ.ಪಂ. ಸಿಇಓಗಳ ಸಭೆಯಲ್ಲಿ ಸಿಎಂ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಅನುಷ್ಠಾನ ಚುರುಕುಗೊಳಿಸಿ: ಜಿ.ಪಂ. ಸಿಇಓಗಳ ಸಭೆಯಲ್ಲಿ ಸಿಎಂ ಸೂಚನೆ

spot_img
- Advertisement -
- Advertisement -

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನ ಚುರುಕುಗೊಳಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಸಿಇಓಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಈ ಯೋಜನೆಯಲ್ಲಿ ಗುಣಮಟ್ಟದ ಸಮಸ್ಯೆಗಳನ್ನು ನಿವಾರಿಸಬೇಕು. ಜೂನ್ 15 ರಂದು ಬ್ಯಾಚ್ -1 ಕಾಮಗಾರಿಗಳ ಬಗ್ಗೆ ಪರಿಶೀಲನೆ ಹಾಗೂ ಜೂನ್ 30 ರಂದು ಬ್ಯಾಚ್ 2 ರ ಕಾಮಗಾರಿಗಳ ಬಗ್ಗೆ ಪರಿಶೀಲಿಸಲು ಹಾಗೂ ಪ್ರತಿ ಮಾಹೆ ಪ್ರಗತಿ ಪರಿಶೀಲಿಸಿ ವರದಿ ಸಲ್ಲಿಸುವಂತೆಯೂ ಸಿಎಂ ಸೂಚಿಸಿದರು.

ಇದೇ ವೇಳೆ ಜಲಜೀವನ್ ಮಿಷನ್ ಕಾರ್ಯಕ್ರಮಗಳನ್ನು ಮಾರ್ಚ್ ಅಂತ್ಯದೊಳಗೆ 80 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕವನ್ನು ಒದಗಿಸುವ ಗುರಿ ನೀಡಿದರು. ಟೆಂಡರ್ ಗಳನ್ನು ತುರ್ತಾಗಿ ಅಂತಿಮಗೊಳಿಸಲು ಹಾಗೂ ಓವರ್ ಹೆಡ್ ಟ್ಯಾಂಕುಗಳ ಮರುವಿನ್ಯಾಸ ಮಾಡುವಂತೆ ಸಿಎಂ ಬೊಮ್ಮಾಯಿ ಜಿ.ಪಂ. ಸಿಇಓಗಳಿಗೆ ಸೂಚಿಸಿದರು.

ಇದೇ ವೇಳೆ ಜಲಜೀವನ್ ಮಿಷನ್ ಯೋಜನೆ ಮೂಲಕ ಜನರಿಗೆ ಸೌಲಭ್ಯ ದೊರಕಬೇಕು ಮತ್ತು ದೂರುಗಳಿಗೆ ಅವಕಾಶ ನೀಡಬಾರದು ಎಂದು ಕೂಡಾ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!