Sunday, June 7, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಕಿ ಇರುವ ಗ್ರಾಮ ವನ್ ಕೇಂದ್ರ ತಕ್ಷಣ ಆರಂಭಿಸಿ ; ಡಿಸಿಗಳ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಕಿ ಇರುವ ಗ್ರಾಮ ವನ್ ಕೇಂದ್ರ ತಕ್ಷಣ ಆರಂಭಿಸಿ ; ಡಿಸಿಗಳ ಸಭೆಯಲ್ಲಿ ಸಿಎಂ ಬೊಮ್ಮಾಯಿ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಿತು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಾಪಿಸಬೇಕಿರುವ ಗ್ರಾಮ ಒನ್ ಕೇಂದ್ರಗಳನ್ನು ತಕ್ಷಣ ಪ್ರಾರಂಭ ಮಾಡಲು ಸಿಎಂ ಬೊಮ್ಮಾಯಿ ಸೂಚಿಸಿದರು. ಅಲ್ಲದೇ ಈ ತಿಂಗಳೊಳಗೆ ಅನುಮೋದನೆ ನೀಡಿ ಉದ್ಘಾಟನೆಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

ದಕ್ಷಿಣ ಕನ್ನಡಯಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಮೆಗಾ ಹಾಸ್ಟಲ್‍ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿರುವ ಸಿಎಂ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾರಾಯಣ ಗುರುಗಳ ವಸತಿ ಶಾಲೆಗಳ ನಿರ್ಮಾಣಕ್ಕೆ ಆದ್ಯತೆ ಮೇಲೆ ಜಮೀನು ಗುರುತಿಸುವಂತೆ ಆದೇಶಿಸಿದ್ದಾರೆ.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು.

- Advertisement -

Latest News

error: Content is protected !!