Wednesday, June 3, 2026
Homeತಾಜಾ ಸುದ್ದಿಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಂ. ಇಬ್ರಾಹಿಂ

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಂ. ಇಬ್ರಾಹಿಂ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ತೊರೆದ ಸಿ. ಎಂ. ಇಬ್ರಾಹಿಂ ಇಂದು ಜೆಡಿಎಸ್ ಪಕ್ಷದ ಕಚೇರಿ ಜೆ. ಪಿ. ಭವನದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್ ಪಕ್ಷ ಸೇರಿದರು. ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಎಚ್. ಕೆ. ಕುಮಾರಸ್ವಾಮಿ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.

ಜೆಡಿಎಸ್ ಪಕ್ಷ ಸೇರಿದ ಬಳಿಕ ಸಿ. ಎಂ. ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ಎಚ್. ಕೆ. ಕುಮಾರಸ್ವಾಮಿ ಅಧಿಕಾರವನ್ನು ಹಸ್ತಾಂತರ ಮಾಡಿದರು. ಈ ಮೂಲಕ ಜೆಡಿಎಸ್ ಪಕ್ಷ 2023ರ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷದಲ್ಲಿ ಭಾರೀ ಬದಲಾವಣೆ ಮಾಡಿದೆ.

ಸಿ. ಎಂ. ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಕೊಟ್ಟ ಎಚ್. ಕೆ. ಕುಮಾರಸ್ವಾಮಿ ಜೆಡಿಎಸ್ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಎಚ್. ಡಿ. ಕುಮಾರಸ್ವಾಮಿ ಉಭಯ ನಾಯಕರನ್ನು ಅಭಿನಂದಿಸಿದರು.

ಎಚ್. ಡಿ. ಕುಮಾರಸ್ವಾಮಿ ಮಾತನಾಡಿ, “ಎಚ್. ಕೆ. ಕುಮಾರಸ್ವಾಮಿ ಅವರು ಎರಡೂವರೆ ವರ್ಷಗಳ ಅಂತ್ಯಂತ ಸಂಕಷ್ಟದ ಸನ್ನಿವೇಶದಲ್ಲಿ ಎಲ್ಲರನ್ನೂ ಜೊತೆಗೆ ತೆಗೆದುಕೊಂಡು ಹೋಗಿದ್ದಾರೆ. ಸಿ. ಎಂ. ಇಬ್ರಾಹಿಂ ಪಕ್ಷಕ್ಕೆ ಮರಳಿ ಬಂದಿದ್ದಾರೆ. ಸದ್ಯದ ಸನ್ನಿವೇಶದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಿ. ಎಂ. ಇಬ್ರಾಹಿಂ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ” ಎಂದರು.

- Advertisement -

Latest News

error: Content is protected !!