Sunday, June 7, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಉಡುಪಿ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

- Advertisement -
- Advertisement -

ಉಡುಪಿ: ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಮತ್ತು ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್‌ ಕಾನ್‌ಸ್ಟೆಬಲ್‌ ಶಂಕರ್, 2020ನೆ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಬಾರಕೂರು ಮೂಲದ ರಾಮಚಂದ್ರ ನಾಯಕ್, 2003ರಲ್ಲಿ ಎಸ್ಸೈಯಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದು, ಗದಗ, ಬೆಂಗಳೂರು, ಬಳ್ಳಾರಿ, ಉಡುಪಿ, ಮಂಗಳೂರಿನಲ್ಲಿ ಎಸ್ಸೈಯಾಗಿ ಕರ್ತವ್ಯ ನಿರ್ವಹಿಸಿದ್ದರು. 2011ರಲ್ಲಿ ಪೊಲೀಸ್ ನಿರೀಕ್ಷಕರಾಗಿ ಭಡ್ತಿ ಹೊಂದಿದ್ದ ಇವರು, ಕಾರ್ಕಳ ಎಎನ್‌ಎಫ್, ಹೊಸನಗರ, ಮುಲ್ಕಿ ಮೂಡಬಿದ್ರೆಯಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಅದೇ ರೀತಿ ಬೈಂದೂರು ಮೂಲದ ಪ್ರಸ್ತುತ ಎಸ್‌ಐಟಿ ಲೋಕಾಯುಕ್ತ ಬೆಂಗಳೂರಿನಲ್ಲಿ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಬೈಂದೂರು ಕೂಡ 2020ನೆ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

- Advertisement -

Latest News

error: Content is protected !!