Thursday, June 4, 2026
Homeತಾಜಾ ಸುದ್ದಿಸಂಪಾಜೆಯಲ್ಲಿ ಮಳೆ ಹಾನಿ ಸಂತ್ರಸ್ಥರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಸಂಪಾಜೆಯಲ್ಲಿ ಮಳೆ ಹಾನಿ ಸಂತ್ರಸ್ಥರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ

- Advertisement -
- Advertisement -

ಮಡಿಕೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಡಿಕೇರಿ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಮಡಿಕೇರಿಯಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುವ ವೇಳೆ ಕೊಯನಾಡು ಗಣೇಶ ಸಭಾ ಭವನದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಿದರು.

ಮಳೆಯಿಂದ ತೊಂದರೆಗೆ ಒಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸ್ಥಳದಲ್ಲಿ ಸಿಎಂ ಬೊಮ್ಮಾಯಿ ಸೂಚನೆ ನೀಡಿದರು

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಮತ್ತು ಇತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!