Wednesday, July 15, 2026
Homeಕರಾವಳಿಉಡುಪಿಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ಬಾಕಿ ವೇತನ ಪಾವತಿಗೆ ಸಿಎಂ ಸೂಚನೆ

ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ಬಾಕಿ ವೇತನ ಪಾವತಿಗೆ ಸಿಎಂ ಸೂಚನೆ

- Advertisement -
- Advertisement -

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯ ಬಾಕಿ ವೇತನ ಪಾವತಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳಲ್ಲಿ ಚರ್ಚಿಸಿದ್ದು ಮನವಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಎಡಿಸಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶೀಲನ ಸಮಿತಿ ರಚಿಸಿ ಆಸ್ಪತ್ರೆಗೆ ಅವಶ್ಯ ಇರುವ ವೈದ್ಯಾಧಿಕಾರಿ, ಸಿಬ್ಬಂದಿ ವರ್ಗ ನೇಮಿಸುವುದು ಹಾಗೂ ಸಿಬ್ಬಂದಿ ಬಾಕಿ ಇರುವ ವೇತನ ಪಾವತಿಯ ಬಗ್ಗೆ ವರದಿ ತಯಾರಿಸಲಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

- Advertisement -

Latest News

error: Content is protected !!