Thursday, June 25, 2026
Homeಕರಾವಳಿಮೂಡಬಿದಿರೆಯಲ್ಲಿ ಸಿಎಂ ರೈತ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿಗಳ ಸಮ್ಮೇಳನ: ಫಲಾನುಭವಿ ವಿದ್ಯಾರ್ಥಿಗಳೊಂದಿಗೆ ಸಿಎಂ ಸಂವಾದ

ಮೂಡಬಿದಿರೆಯಲ್ಲಿ ಸಿಎಂ ರೈತ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿಗಳ ಸಮ್ಮೇಳನ: ಫಲಾನುಭವಿ ವಿದ್ಯಾರ್ಥಿಗಳೊಂದಿಗೆ ಸಿಎಂ ಸಂವಾದ

- Advertisement -
- Advertisement -


ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದ್ದರು.

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಿಎಂ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ರೈತ ವಿದ್ಯಾನಿಧಿ ಯೋಜನೆಯ ಫಲಾನುಭವಿ ವಿದ್ಯಾರ್ಥಿಗಳೊಂದಿಗೆ ಸಿಎಂ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ವಿ. ಸುನೀಲ್ ಕುಮಾರ್, ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ್ ಪೂಜಾರಿ, ಎಸ್ ಅಂಗಾರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ರಘುಪತಿ ಭಟ್, ವೇದವ್ಯಾಸ ಕಾಮತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರೈತ ವಿದ್ಯಾನಿಧಿ ಯೋಜನೆಯಡಿ
21,823 ವಿದ್ಯಾರ್ಥಿಗಳಿಗೆ ಒಟ್ಟು 787.61 ಲಕ್ಷ ರೂಪಾಯಿ ಪಾವತಿಸಲಾಗಿದ್ದು, ಒಟ್ಟು ನೋಂದಾಯಿತ ಫಲಾನುಭವಿಗಳ ಸಂಖ್ಯೆ 36000 ಆಗಿದೆ.

- Advertisement -

Latest News

error: Content is protected !!