Friday, April 26, 2024
Homeಕರಾವಳಿಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಕೆ ವಸಂತ ಬಂಗೇರ ಮನವಿಗೆ ಸಿಎಂ ಸ್ಪಂದನೆ:...

ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಕೆ ವಸಂತ ಬಂಗೇರ ಮನವಿಗೆ ಸಿಎಂ ಸ್ಪಂದನೆ: ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ಧಾರಕ್ಕೆ 50 ಲಕ್ಷ ಮಂಜೂರು

spot_img
- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದೆ. ಹೀಗಾಗಿ ಜೀರ್ಣೋದ್ಧಾರ ಕಾರ್ಯಕ್ಕಾಗಿ ಅನುದಾನ ನೀಡುವಂತೆ  ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಕೆ ವಸಂತ ಬಂಗೇರ ಅವರು ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಈ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು 50ಲಕ್ಷ ಅನುದಾನಕ್ಕೆ ಆದೇಶಿಸಿದ್ದಾರೆ.

ಕಳೆದ ಜ.28 ರಂದು ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕರು ಸರಕಾರದ ವತಿಯಿಂದ ಗರಿಷ್ಠ ಅನುದಾನ ಮಂಜೂರಾತಿಗೆ ಪ್ರಯತ್ನಿಸುವುದಾಗಿ ತಿಳಿಸಿ, “ನಾನೂ, ನೀವು ಜೊತೆಯಲ್ಲೇ ಬೆಂಗಳೂರಿಗೆ ತೆರಳಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ರವರಲ್ಲಿ ಮನವಿ ಮಾಡೋಣ” ಎಂದು ಮಾಜಿ ಶಾಸಕ ವಸಂತ ಬಂಗೇರ ರವರನ್ನು ಆಹ್ವಾನಿಸಿದ್ದರು.

ಅದರಂತೆ ಇಬ್ಬರೂ ಜೊತೆಯಾಗಿ ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಕೋರಿ ಮನವಿ ನೀಡಿದ್ದಾರೆ

- Advertisement -
spot_img

Latest News

error: Content is protected !!