Thursday, June 4, 2026
Homeತಾಜಾ ಸುದ್ದಿರಾಜಕೀಯ ಅಸಮತೋಲದಿಂದ ನನ್ನ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ: ಸಂತೋಷ್ ಪತ್ನಿ ಜಾಹ್ನವಿ ಹೇಳಿಕೆ

ರಾಜಕೀಯ ಅಸಮತೋಲದಿಂದ ನನ್ನ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ: ಸಂತೋಷ್ ಪತ್ನಿ ಜಾಹ್ನವಿ ಹೇಳಿಕೆ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಪತ್ನಿ ಜಾಹ್ನವಿ ಸಂತೋಷ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೌಟುಂಬಿಕವಾಗಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ. ಬೆಳಗ್ಗಿನಿಂದಲೇ ಅವರು ಸ್ವಲ್ಪ ಬೇಜಾರಾಗಿದ್ದರು. ಸಂಜೆ ಹೊರಗಡೆ ಹೋಗಿದ್ದರು. ಹೀಗೆ ಹೋದವರು ಸಂಜೆ ಸುಮಾರು 7 ಗಂಟೆಗೆ ಮನೆಗೆ ಬಂದರು. ಓದುತ್ತಾ ಇರುತ್ತೀನಿ ಅಂತ ಮನೆಯ ಮೇಲೆ ಹೋಗಿದ್ದರು. ಈ ವೇಳೆ ನಾನು ಊಟಕ್ಕೆ ಏನು ಮಾಡ್ಲಿ ಅಂತ ಕೇಳೋದಕ್ಕೆ ಹೋದೆ. ಆಗ ಅವರು ಸ್ವಲ್ಪ ಬೇಜಾರಲ್ಲಿದ್ದರು. ಅದಾಗಲೇ ಅವರು ಏನು ಮಾತನಾಡುವ ಪರಿಸ್ಥಿತಿಯಲ್ಲಿರಲಿಲ್ಲ. ಅವರು ಪ್ರಜ್ಞೆ ಕಳೆದುಕೊಳ್ಳುತ್ತಾ ಇದ್ದರು. ಇದರಿಂದ ಗಾಬರಿಗೊಂಡ ನಾವು ಅವರನ್ನು ಅಲ್ಲಿಂದ ಕರೆದುಕೊಂಡು ಬಂದು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದೆವು ಎಂದು ಜಾಹ್ನವಿ ತಿಳಿಸಿದ್ದಾರೆ.

ರಾಜಕೀಯ ಅಸಮತೋಲನದಿಂದ ಸ್ವಲ್ಪ ಬೇಜಾರಾಗಿದ್ದರು ಅಷ್ಟೆ. ಇನ್ನು ಕೌಟುಂಬಿಕವಾಗಿ ನಾವು ತುಂಬಾನೇ ಚೆನ್ನಾಗಿದ್ದೇವೆ. ಅಂಥದ್ದೇನೂ ಸಮಸ್ಯೆ ನಮ್ಮ ನಡುವೆ ಇಲ್ಲ. ಮುಕ್ತವಾಗಿ ಮಾತಾಡಿಕೊಂಡು ಎಲ್ಲಾ ರೀತಿಯಲ್ಲೂ ನಾವಿಬ್ಬರೂ ಚೆನ್ನಾಗಿದ್ದೇವೆ ಎಂದಿದ್ದಾರೆ.

- Advertisement -

Latest News

error: Content is protected !!