Saturday, June 6, 2026
Homeತಾಜಾ ಸುದ್ದಿಮುಡಾ ಹಗರಣ ಸಂಬಂಧ ಲೋಕಾಯುಕ್ತದೆದುರು ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣ ಸಂಬಂಧ ಲೋಕಾಯುಕ್ತದೆದುರು ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಸೂರು; ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಅದರಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಸಾಮಾನ್ಯರಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸುತ್ತಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -

Latest News

error: Content is protected !!