Wednesday, June 24, 2026
Homeಕರಾವಳಿಮಂಗಳೂರುಬಿಜೆಪಿಯವರು ಬಜೆಟ್ ಓದಲ್ಲ, ಹಾಗಾಗಿ ಎಕನಾಮಿಕ್ಸ್ ಗೊತ್ತಾಗುವುದಿಲ್ಲ; ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಬಿಜೆಪಿಯವರು ಬಜೆಟ್ ಓದಲ್ಲ, ಹಾಗಾಗಿ ಎಕನಾಮಿಕ್ಸ್ ಗೊತ್ತಾಗುವುದಿಲ್ಲ; ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷವಾಗಿದ್ದು ನಾವು ಏನೇನು ಕೆಲಸ ಮಾಡಿದ್ದೇವೆ ಅಂತಾ ಜನರಿಗೆ ತಿಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರು ಬಜೆಟ್ ಓದುವುದಿಲ್ಲ, ಅದಕ್ಕೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ ಹಾಗಾಗಿ ಅಭಿವೃದ್ಧಿ ಶೂನ್ಯ ಎನ್ನುತ್ತಾರೆ ಎಂದು ಹೇಳಿದ್ದಾರೆ.

ನೀರಾವರಿಗೆ ಈ ವರ್ಷ 18 ಸಾವಿರ ಕೋಟಿ ಅನುದಾನ ಇಟ್ಟಿದ್ದು, ಗ್ಯಾರಂಟಿ ಸೇರಿಸಿ ಒಂದು ಲಕ್ಷದ 20 ಸಾವಿರ ಕೋಟಿ ರೂಪಾಯಿ ಬಜೆಟ್ ಕೊಟ್ಟಿದ್ದೇವೆ ಎಂದು ಹೇಳರುವ ಸಿಎಂ, ಬಡವರಿಗೆ ಆರ್ಥಿಕವಾಗಿ ಸಫಲತೆಯನ್ನು ಕೊಡುವುದು ಅಭಿವೃದ್ಧಿ ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಇದೇ ವೇಳೆ, ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ಬಂದರೆ ಮಾತ್ರ ಸಾಲದು, ಆರ್ಥಿಕ ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಮಾತನ್ನೂ ಸಿದ್ದರಾಮಯ್ಯ ಮಾತಿನ ವೇಳೆ ಉಲ್ಲೇಖಿಸಿದ್ದಾರೆ.

- Advertisement -

Latest News

error: Content is protected !!