Sunday, October 18, 2026
Homeತಾಜಾ ಸುದ್ದಿಸಿಎಂ ಸಿದ್ದರಾಮಯ್ಯ ಇಂದು ಸಿಂಧೂರರಾಮಯ್ಯ ಆಗಿ ಬದಲಾಗಿದ್ದಾರೆ; ಮಾಜಿ ಸಂಸದ ಪ್ರತಾಪ್‌ ಸಿಂಹ ವ್ಯಂಗ್ಯ 

ಸಿಎಂ ಸಿದ್ದರಾಮಯ್ಯ ಇಂದು ಸಿಂಧೂರರಾಮಯ್ಯ ಆಗಿ ಬದಲಾಗಿದ್ದಾರೆ; ಮಾಜಿ ಸಂಸದ ಪ್ರತಾಪ್‌ ಸಿಂಹ ವ್ಯಂಗ್ಯ 

- Advertisement -
- Advertisement -

ಮೈಸೂರು: ನಮ್ಮ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಇಂದು ಜನಕ್ಕೆ ಹೆದರಿ ಹಣೆಗೆ ಸಿಂಧೂರ ಇಟ್ಟುಕೊಂಡಿದ್ದು, ‘ಸಿಂಧೂರರಾಮಯ್ಯ’ ಆಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಲೇವಡಿ ಮಾಡಿದ್ದಾರೆ.

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಕೇಂದ್ರ ಸರ್ಕಾರದ ಯುದ್ಧದ ಯೋಚನೆ ಕುರಿತು ಪ್ರತಿಕ್ರಯಿಸಿದ್ದ ಸಿದ್ದರಾಮಯ್ಯ ಅವರು ಯುದ್ಧ ಬೇಡ ಅಂದು ಪಾಕಿಸ್ತಾನಿಗಳಿಗೆ ಹೀರೋ ಆಗಿದ್ದರು. ಜನ ಥೂ ಛೀ ಎಂದು ಉಗಿದ ಮೇಲೆ ಸಿದ್ದರಾಮಯ್ಯ ಬದಲಾಗಿದ್ದರು. ಇಂದು ಸಿಂಧೂರ ಕಾರ್ಯಾಚರಣೆ ಬಳಿಕ ಕಾಂಗ್ರೆಸ್ ಶಾಂತಿಯ ಮಂತ್ರದ ಟ್ವೀಟ್ ಮಾಡಿತ್ತು. ಜನ ತಿರುಗಿ ಬಿದ್ದ ಮೇಲೆ ಟ್ವೀಟ್ ಡಿಲೀಟ್ ಮಾಡಿದೆ. ಜನಕ್ಕೆ ಹೆದರಿ ಸಿದ್ದರಾಮಯ್ಯ ಇಂದು ಹಣೆಗೆ ಸಿಂಧೂರ ಇಟ್ಟುಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಇಂದು ಸಿಂಧೂರರಾಮಯ್ಯ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.

- Advertisement -

Latest News

error: Content is protected !!