Tuesday, July 14, 2026
Homeತಾಜಾ ಸುದ್ದಿಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತ ಬೆಳವಣಿಗೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಕೆಲವು ಹೊತ್ತು ಮಾತುಕತೆ ನಡೆಸಿದ್ದಾರೆ.

ಎರಡೂವರೆ ವರ್ಷಗಳ ಬಳಿಕದ ಅಧಿಕಾರ ಹಸ್ತಾಂತರದ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ನಡೆದಿರುವ ಚಟುವಟಿಕೆಗಳ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರನ್ನು ಸಿಎಂ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ‌.

ಈ ಮಧ್ಯೆ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಡೆದ ಮೀನುಗಾರಿಕಾ ‌ನಿಗಮದ ಮತ್ಸ್ಯ ಮೇಳದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದರು.

- Advertisement -

Latest News

error: Content is protected !!