Wednesday, June 24, 2026
Homeತಾಜಾ ಸುದ್ದಿರಾಹುಲ್ ಗಾಂಧಿ ಏರ್ಪಡಿಸಿದ್ದ ಔತಣಕೂಟಕ್ಕಾಗಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿ ರಾತ್ರಿಯೇ ಬೆಂಗಳೂರಿಗೆ ವಾಪಸಾದ ಸಿಎಂ...

ರಾಹುಲ್ ಗಾಂಧಿ ಏರ್ಪಡಿಸಿದ್ದ ಔತಣಕೂಟಕ್ಕಾಗಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿ ರಾತ್ರಿಯೇ ಬೆಂಗಳೂರಿಗೆ ವಾಪಸಾದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನವದೆಹಲಿ: ಇಂಡಿಯಾ ಒಕ್ಕೂಟದ ನಾಯಕರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಔತಣಕೂಟ ಏರ್ಪಡಿಸಿದ್ದರು. ‌ಔತಣಕೂಟದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಡಿಯಾ ಒಕ್ಕೂಟದ ನಾಯಕರ ಜೊತೆ ಔತಣಕೂಟದಲ್ಲಿ ಭಾಗಿಯಾಗಿದ್ದರು.

ಔತಣಕೂಟದಲ್ಲಿ ಪಾಲ್ಗೊಳ್ಳುವುದಕ್ಕಾಗಿಯೇ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ, ಔತಣಕೂಟ ಕೂಟ ಮುಗಿಸಿ ರಾತ್ರಿಯೇ ಬೆಂಗಳೂರಿಗೆ ವಾಪಸಾಗಿದ್ದಾರೆ.

ದೆಹಲಿಯ ಸುನೇರಿ ಬಾಗ್ ನಲ್ಲಿರುವ ರಾಹುಲ್ ಗಾಂಧಿ ನಿವಾಸದಲ್ಲಿ ನಡೆದ ಔತಣಕೂಟದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ, ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

- Advertisement -

Latest News

error: Content is protected !!