Thursday, June 4, 2026
Homeಕರಾವಳಿಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರಕ್ರಿಯೆಯಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ

ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರಕ್ರಿಯೆಯಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಳ್ತಂಗಡಿ: ಮೇ.21 ರಂದು ವಸಂತ ಬಂಗೇರ ಅವರ ಉತ್ತರಕ್ರಿಯೆಯಲ್ಲಿ ಸಿಎಂ.ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಮೇ 21 ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಸಿಎಂ ವಿಶೇಷ ವಿಮಾನದ ಮೂಲಕ ಹೊರಟು 12 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಬೆಳ್ತಂಗಡಿಯ ಗುರುವಾಯನಕೆರೆಯ ಮಂಜಿಬೆಟ್ಟಿನ ಎಫ್.ಎಂ. ಗಾರ್ಡನ್ ನಲ್ಲಿ ನಡೆಯಲಿರುವ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.ಬಳಿಕ ರಸ್ತೆ ಮಾರ್ಗದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

- Advertisement -

Latest News

error: Content is protected !!