Thursday, June 4, 2026
Homeತಾಜಾ ಸುದ್ದಿಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಬೆಂಗಳೂರು; ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ವಿಧಾನಸೌಧದ ಎದುರು ಯಾವುದೇ ದುರ್ಘಟನೆ ನಡೆದಿಲ್ಲ. ನಿರೀಕ್ಷೆಗೂ ಮೀರಿ ಜನರು ಸ್ಟೇಡಿಯಂಗೆ ಬಂದಿದ್ದಾರೆ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ೩೫ ಸಾವಿರ ಆಸನದ ವ್ಯವಸ್ಥೆಯಿದೆ.ಆದ್ರೆ ೨ ಲಕ್ಷಕ್ಕೂ ಅಧಿಕ ಜನರು ಜಮಾಯಿಸಿದ್ದಾರೆ.ಈ ವೇಳೆ ದೊಡ್ಡ ದುರಂತ ಸಂಭವಿಸಿದೆ ಎಂದಿದ್ದಾರೆ.

ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ. ಪ್ರತಿ ಕುಟುಂಬಕ್ಕೆ 10 ಲಕ್ಷ ಸರ್ಕಾರದಿಂದ ಪರಿಹಾರ ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ. ದುರಂತ ಕುರಿತು ಸೂಕ್ತ ತನಿಖೆಗೆ ಸೂಚಿಸುತ್ತೇನೆ ಎಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ,

- Advertisement -

Latest News

error: Content is protected !!