ಮಂಗಳೂರು: ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಕೊಲೆ ಪ್ರಕರಣದಲ್ಲಿ ಪೊಲೀಸರು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ, ತನಿಖೆ ಬಹಳ ಪ್ರಗತಿಯಲ್ಲಿದೆ, ಪ್ರತ್ಯಕ್ಷದರ್ಶಿ ಹೇಳಿರುವ ಪ್ರಕಾರ ಇಬ್ಬರು ಕೊಲೆ ಮಾಡಿದ್ದಾರೆ ಅಂತಾ ಹೇಳಿದ್ದಾರೆ, ಅವರನ್ನು ಬೇಗ ಹಿಡಿಯುತ್ತೇವೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಊಹಾಪೋಹಗಳಿಗೆ ಅವಕಾಶ ಕೊಡದೇ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಆಗುವಂತೆ ಯಾರು ಕೂಡ ನಡೆದುಕೊಳ್ಳಬಾರದು, ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಜನತೆಗೆ ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.
ಪ್ರಕರಣದ ಬಗ್ಗೆ ಪೊಲೀಸರು ಸ್ವತಂತ್ರವಾಗಿ ತನಿಖೆ ಮಾಡುತ್ತಾರೆ ಎಂದು ಹೇಳಿರುವ ಬಸವರಾಜ ಬೊಮ್ಮಾಯಿ, ತಪ್ಪಿತಸ್ಥರು ಯಾರೇ ಇದ್ದರೂ ನೂರಕ್ಕೆ ನೂರು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.