Thursday, June 4, 2026
Homeತಾಜಾ ಸುದ್ದಿನಾಳೆ ಸಿಎಂ ಬಸವರಾಜ ಬೊಮ್ಮಾಯಿ ವಿದೇಶ ಪ್ರವಾಸ

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ವಿದೇಶ ಪ್ರವಾಸ

- Advertisement -
- Advertisement -

ಬೆಂಗಳೂರು: ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ‌ ಬೆಳಗ್ಗೆ 10 ಗಂಟೆಗೆ ಸ್ವಿಟ್ಜರ್ಲೆಂಡ್‌‌ ನ ದಾವೋಸ್ ಗೆ ತೆರಳಲಿರುವ ಸಿಎಂ, ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ನಾಳೆ ಬೆಳಗ್ಗೆ ತೆರಳಿ ಮೇ 26 ರಂದು ಬೆಂಗಳೂರಿಗೆ ಸಿಎಂ ವಾಪಸ್ ಆಗಲಿದ್ದಾರೆ.

ಶೃಂಗಸಭೆಯಲ್ಲಿ ಎರಡು ಸೆಷನ್ ಗಳಲ್ಲಿ ಸಿಎಂ ಬೊಮ್ಮಾಯಿ ಭಾಷಣ ಮಾಡಲಿದ್ದಾರೆ.

ಸಿಎಂ ಜೊತೆ ದಾವೋಸ್‌ ನಲ್ಲಿ ಶೃಂಗಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮತ್ತು ಐಟಿ-ಬಿಟಿ ಸಚಿವ ಡಾ. ಅಶ್ವಥ್ ನಾರಾಯಣ ಸಹ ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸಿಎಂ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಎರಡನೇ ಬಾರಿಗೆ ದಾವೋಸ್ ನಲ್ಲಿ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಬೊಮ್ಮಾಯಿ ಪಾಲ್ಗೊಳ್ಳುತ್ತಿದ್ದು, ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದ ವೇಳೆ ಭಾಗವಹಿಸಿದ್ದರು.

- Advertisement -

Latest News

error: Content is protected !!