Saturday, July 18, 2026
Homeತಾಜಾ ಸುದ್ದಿಭಾನುವಾರದ ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವ ಸಿಎಂ ಯಡಿಯೂರಪ್ಪ ಏನ್ ಮಾಡ್ತಿದ್ದಾರೆ ಗೊತ್ತಾ?

ಭಾನುವಾರದ ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವ ಸಿಎಂ ಯಡಿಯೂರಪ್ಪ ಏನ್ ಮಾಡ್ತಿದ್ದಾರೆ ಗೊತ್ತಾ?

- Advertisement -
- Advertisement -

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಶತಾಯ ಗತಾಯ ಯತ್ನಿಸುತ್ತಿರುವ ರಾಜ್ಯ ಸರ್ಕಾರ ಕೊರೊನಾಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಪ್ರತಿ ಭಾನುವಾರ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ ಸರ್ಕಾರ. ಹೀಗಾಗಿ ಇಂದು ಮನೆಯಲ್ಲೇ ಕಾಲ ಕಳೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

“ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವ-ಕ್ವಾರಂಟೈನ್ ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ”. ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಜೊತೆಗೆ ಪುಸ್ತಕ ಓದುತ್ತಿರುವ ಫೋಟೋ ಒಂದನ್ನು ಕೂಡ ಅವರು ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!