Friday, May 3, 2024
Homeತಾಜಾ ಸುದ್ದಿಇಂದಿನಿಂದ ಅಲ್ಲ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ ಟ್ವೀಟ್

ಇಂದಿನಿಂದ ಅಲ್ಲ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ ಟ್ವೀಟ್

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದರು. ಆದ್ರೀಗ ಸಿಎಂ ಟ್ವೀಟ್ ಮಾಡಿದ್ದು, ಇಂದಿನಿಂದ ಅಲ್ಲ ನಾಳೆ ರಾತ್ರಿಯಿಂದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂದಿದ್ದಾರೆ.

ಅಲ್ಲದೇ ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ಸಿಎಂ ಹೇಳಿದ್ದಾರೆ.

- Advertisement -
spot_img

Latest News

error: Content is protected !!