Friday, May 10, 2024
Homeಕರಾವಳಿಉಡುಪಿಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಕರಾವಳಿ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಕರಾವಳಿ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

spot_img
- Advertisement -
- Advertisement -

ಬೆಂಗಳೂರು: ಕೋವಿಡ್ ಸೋಂಕು ಮತ್ತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಕೇರಳದಲ್ಲಿ ಸೋಂಕು ಹೆಚ್ಚಾಗಿರುವ ಕಾರಣ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಬೇಕಾಗಿರುವ ಕಾರಣ ವೀಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಡಿಹೆಚ್ ಓ ಮತ್ತು ಜಿಲ್ಲಾಮಟ್ಟದ ಇತರ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.‌ ಗಡಿಗಳಲ್ಲಿನ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ, ಕೋವಿಡ್ ರಿಪೋರ್ಟ್ ಪರಿಶೀಲನೆ ಸೇರಿದಂತೆ ಹಲವು ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ‌ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಯಾವುದೇ ಮಾರ್ಗದ ಪ್ರಯಾಣಿಕರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ 72 ಗಂಟೆಗಳ ನೆಗೆಟಿವ್ ರಿಪೋರ್ಟ್ ಹೊಂದಿರುವುದನ್ನು ಕಡ್ಡಾಯಗೊಳಿಸಿದೆ‌.

ಕರ್ನಾಟಕ ಮತ್ತು ಕೇರಳ ನಡುವೆ ದಿನ ನಿತ್ಯ ಓಡಾಡುವವರು ಪ್ರತಿ 15 ದಿನಗಳಿಗೊಮ್ಮೆ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಬೇಕಿದೆ.

- Advertisement -
spot_img

Latest News

error: Content is protected !!